ಮತದಾರರ ಪರಿಷ್ಕರಣೆ ಕುರಿತು ಜಾಗೃತಿ ಅತ್ಯಗತ್ಯ: ಮಾನ್ಯ ಇಓ ಮುನಿರಾಜು

ಶಿಡ್ಲಘಟ್ಟ- ತಾಲ್ಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜ್ಞಾನ ಜ್ಯೋತಿ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಇಂದು ತಾಲ್ಲೂಕು ಸ್ವೀಪ್ ಸಮಿತಿಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಡಾಕ್ಟರ್.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ನೆರವೇರಿಸಿದರು ‌
 ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡುವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದಲು ನಿರಂತರ ಪ್ರಯತ್ನದಿಂದಲೇ ನಿಮ್ಮ ಸಾಧನೆಯ ಹಾದಿ ಸುಗಮವಾಗಲಿದೆ. ನಮ್ಮ ದೇಶಕ್ಕೆ ವಿದ್ಯಾರ್ಥಿಗಳೇ ಮುಂದಿನ ಶಕ್ತಿ. ಆ ನಿಟ್ಟಿನಲ್ಲಿ ದೇಶದ ಅಭಿವೃದ್ಧಿ ಮತ್ತು ಸಮಾಜದ ಉತ್ತಮ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಡಾಕ್ಟರ್.ಬಿ.ಆರ್.ಅಂಬೇಡ್ಕರ್ ಅವರ ಮಾದರಿಯಲ್ಲಿ ಯಶಸ್ಸಿನ ದಢ ಸೇರುವುದು ಒಂದೇ ನಿಮ್ಮ ಗುರಿಯಾಗಬೇಕು ಎಂದು ಸಲಹೆ ನೀಡಿದರು. ಮುಂದಿನ ವರ್ಷದಲ್ಲಿ ಚುನಾವಣೆ ಇರುವ ಹಿನ್ನೆಲೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗಬೇಕು ಎಂದರು. ನಿಮ್ಮ ಹಳ್ಳಿ ಮತ್ತು ಗ್ರಾಮಗಳಲ್ಲಿ ಮತದಾರರ ಸೇರ್ಪಡೆ ಪ್ರಕ್ರಿಯೆ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿಯ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜು, ಹೊಸಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, CDPO ಇಲಾಖೆಯ ನವ್ತಾಜ್ ಬೇಗಂ ರವರು, ECO ಭಾಸ್ಕರ್ ಗೌಡ ರವರು, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ತಿಮ್ಮರಾಜು ರವರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಜಗದೀಶ್ ರವರು, ಬಿಸಿಎಂ ವಿಸ್ತಾರಣಾಧಿಕಾರಿಯವರು, ಹೊಸಪೇಟೆ, ಜಂಗಮಕೋಟೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯವರು, ಮನೋವೈದ್ಯಕೀಯ ಸಮಾಲೋಚಕರು, ಆರೋಗ್ಯ ಇಲಾಖೆಯ ವೈದ್ಯರು, ಜ್ಞಾನ ಜ್ಯೋತಿ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿದಂತೆ ಇತರರು ಸಹ ಹಾಜರಿದ್ದರು.

ವರದಿ: ಲೋಕೇಶ್ ಟಿ.ಎನ್

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ