ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ
ಶಿಡ್ಲಘಟ್ಟ::ತಾಲ್ಲೂಕಿನ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಚ್.ಕ್ರಾಸ್ ಬಳಿಯ ಸಾಯಿ ವಿದ್ಯಾ ನಿಧಿ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಇಂದು ತಾಲ್ಲೂಕು ಸ್ವೀಪ್ ಸಮಿತಿಯ ವತಿಯಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜು ಅವರು ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜು ಅವರು ಮಾತನಾಡಿ, ಮೊದಲನೆಯದಾಗಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವುದೇ ನಮ್ಮ ಮೊದಲ ಗುರಿಯಾಗಿರಬೇಕು. ಹಲವಾರು ಗಣ್ಯರು ಮತ್ತು ಸಂಶೋಧನಾ ವ್ಯಕ್ತಿಗಳು ಅವರ ಜೀವನವನ್ನೇ ಮುಡಿಪಾಗಿಟ್ಟು ತಮ್ಮ ಸಾಧನೆಯ ಗುರಿಯನ್ನು ತಲುಪಲು ಶ್ರಮಪಟ್ಟ ಮಹನೀಯರು ಹಲವಾರು ಗಣ್ಯರು ಇದ್ದಾರೆ. ಅವರು ಪ್ರೇರಣೆ ಮತ್ತು ಶ್ರಮದ ಫಲವೇ ಅವರ ಸಾಧನೆಯ ಗುಟ್ಟು ಎಂದು ಮಕ್ಕಳಿಗೆ ಹಿತಮಾತು ಹೇಳಿದರು.
ನಂತರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಕುರಿತು ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಆಗಿದ್ದು, ಅದನ್ನು ಸಮರ್ಪಕವಾಗಿ ಸೂಕ್ತ ವ್ಯಕ್ತಿಯ ಆಯ್ಕೆ ಮಾಡಲು ಎಲ್ಲರಿಗೂ ಮತದಾನ ಮಾಡುವ ಹಕ್ಕು ಇರಬೇಕು ಎಂದರು. ಪ್ರತಿಯೊಬ್ಬರಿಗೂ ಮತದಾನ ಮಾಡುವ ಮುನ್ನ ನಿಮ್ಮ ಹೆಸರು ಮತ್ತು ವಿಳಾಸ ಸರಿಯಾಗಿದ್ದರೇ ಮಾತ್ರ ನೀವು ಮತ ಚಲಾಯಿಸಲು ಸಾಧ್ಯ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಮುಖೇನ ನಿಮ್ಮ ಹೆಸರು ಮತ್ತು ವಿಳಾಸ ಪರಿಷ್ಕರಿಸಿಕೊಳ್ಳಬೇಕು ಎಂದರು. ನಿಮ್ಮ ಗ್ರಾಮ ಮತ್ತು ಹಳ್ಳಿಗಳಲ್ಲಿರುವ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಗುರುತಿಸಿ ಚೀಟಿಯ ತಿದ್ದುಪಡಿಯ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ECO ಭಾಸ್ಕರ್ ಗೌಡ, ಪಶು ಸಂಗೋಪನಾ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ತಾಲ್ಲೂಕು ಆರೋಗ್ಯಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಬಿಸಿಎಂ ವಿಸ್ತಾರಣಾಧಿಕಾರಿ, ಆರೋಗ್ಯ ನಿರೀಕ್ಷಣಾಧಿಕಾರಿ, ಕುಂಭಿಗಾನಹಳ್ಳಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಸಾಯಿ ವಿದ್ಯಾನಿಧಿ ನ್ಯಾಷನಲ್ ಕಾಲೇಜು ಸಂಸ್ಧೆಯ ಮುಖ್ಯಸ್ಥರು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಸಹ ಹಾಜರಿದ್ದರು.
ವರದಿ -ಲೋಕೇಶ್ ಪಿ.ಎನ್
Comments
Post a Comment