ಕಾನೂನು ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕುಗಳ ಜಿಲ್ಲಾ ಅಧ್ಯಕ್ಷರಾಗಿ ಮುನಿರಾಜು.ಎಂ ನೇಮಕ



ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್‌ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಮುನಿರಾಜ.ಎಂ, ವಕೀಲರು ಬಿನ್, ಮುನಿಶಾಮಪ್ಪ ಎಂಬುವರನ್ನು ನೂತನವಾಗಿ ಆಯ್ಕೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗ, ಕಾಂಗ್ರೆಸ್ ಭವನ, ಬೆಂಗಳೂರು, ಅದ್ಯಕ್ಷರು, ಹಾಗೂ ಹಿರಿಯ ವಕೀಲರಾದ ಶ್ರೀ ಎ.ಎಸ್ ಪೋನ್ನಣ್ಣ ನವರು ನೇಮಕಾತಿ  ಆದೇಶದ ಮೇರೆಗೆ ಡಿ, 5 ರಂದು ಸೋಮವಾರ ನೇಮಕಾತಿ ಆದೇಶಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸನ್ಮಾನ್ಯ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾ‌ರ್ ಅವರ ಅನುಮೋದನೆಯ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಮುನಿರಾಜ.ಎಂ ಆದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದ್ದು,
 ಚಿಕ್ಕಬಳ್ಳಾಪುರ ಜಿಲ್ಲಾ ಕಛೇರಿಯಲ್ಲಿ
ತಾವು ಕೂಡಲೇ ಅಧಿಕಾರವನ್ನು ವಹಿಸಿಕೊಂಡು, ಪಕ್ಷದ ಮುಖಂಡರ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.

ರಾಜ್ಯದ ವರಿಷ್ಠರು, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಮಾರ್ಗದರ್ಶನದಲ್ಲಿ ನಮಗೆ ನೀಡಿರುವ ಉನ್ನತವಾದ ಹುದ್ದೆಯನ್ನು ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ವಕೀಲರಾದ ಮುನಿರಾಜು ನುಡಿದರು.

ಕನ್ನಡ ಮೈತ್ರಿ ನ್ಯೂಸ್ 

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ