ವಿಜೃಂಭಣೆಯಿಂದ ನಡೆದ ಶ್ರೀ ಭೂನೀಳಾ ಸಮೇತ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ


ಶಿಡ್ಲಘಟ್ಟ::ತಲಕಾಯಲ ಬೆಟ್ಟದ ಸೌಂದರ್ಯ ತಪ್ಪಲಿನಲ್ಲಿ ನೆಲೆಸಿರುವ ಶ್ರೀಭೂನೀಳಾ ವೆಂಕಟರಮಣ ಸ್ವಾಮಿಯ ದರ್ಶನ ಪಡೆದ ಎಲ್ಲಾ ಭಕ್ತಾದಿಗಳಿಗೆ ಆರೋಗ್ಯ ಐಶ್ವರ್ಯ ವೃದ್ದಿಸಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿದೆ ಮುಂದಿನ ದಿನಗಳಲ್ಲಿ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ತಲಕಾಯಲ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಭೂನಿಳಾ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಅನುಗ್ರಹ ನಮ್ಮ ಮೇಲಿರಲಿ ನಮ್ಮ ಜೀವನ ಪೂರ್ತಿ ಈ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಲು ಭಗವಂತ ಶಕ್ತಿ ತುಂಬಲಿ ಎಂದು ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹೇಳಿದರು.

ತಲಕಾಯಲ ಬೆಟ್ಟದಲ್ಲಿ ನಡೆಯುವ ಜಾತ್ರೆಯು ಪುರಾಣ ಪ್ರಸಿದ್ಧ ಸ್ಥಳ ಆಗಿದೆ ರಾಮಾಯಣ ಗ್ರಂಥ ರಚಿಸಿದ ಶ್ರೀ ವಾಲ್ಮೀಕಿ ಮಹರ್ಷಿಗಳು ನೆಲೆಸಿರುವಂತಹ ಪುಣ್ಯ ಸ್ಥಳವಾಗಿದ್ದು, ಈ ಸ್ಥಳದಲ್ಲಿ ಬ್ರಹ್ಮ ರಥೋತ್ಸವ, ಕಲ್ಯಾಣೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ, ದನಗಳ ಜಾತ್ರೆ, ಸೇರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ ಇಲ್ಲಿಗೆ ಬರುವ ಭಕ್ತಾದಿಗಳು ಉಚಿತ ಅನ್ನದಾಸೋಹ, ತಂಪಾದ ಮಜ್ಜಿಗೆ ನೀಡಿ ಭಕ್ತಾದಿಗಳಿಗೆ ಅನುಕೂಲ ಮಾಡುವ ಸಂಪ್ರದಾಯವಿದೆ 
ಇದರ ಭಾಗವಾಗಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮತ್ತು ಅವರ ಪತ್ನಿ ಶ್ರೀಮತಿ ಸಹನಾ ರಾಜೀವ್ ಗೌಡ ಕುಟುಂಬ ಸಮೇತ ದೇವರ ದರ್ಶನ ಪಡೆದು ಭಕ್ತಾದಿಗಳಿಗೊಸ್ಕರ ಸುಮಾರು 10 ಸಾವಿರಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆಯನ್ನು ಏರ್ಪಡಿಸಿದ್ದರು ಅದರ ಜೊತೆಗೆ ದೇವರ ಬ್ರಹ್ಮ ರಥೋತ್ಸವ ತೇರಿಗೆ ಹೂವಿನ ಅಲಂಕಾರ ಹಾಗೂ ದೇವಾಲಯಕ್ಕೆ ದೀಪಾಲಂಕಾರ ಮಾಡಿಸಿ ದೇವರ ಕೃಪೆಗೆ ಪಾತ್ರರಾದರು. 

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ.ಮುನಿಯಪ್ಪ ರವರು ಬ್ರಹ್ಮ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಈ ವರ್ಷ ಮಳೆ ಬೆಳೆ ಚೆನ್ನಾಗಿ ಆಗಿ ರೈತರ ಬದುಕು ಹಸನಾಗಲಿ ಎಂದು ಶುಭ ಹಾರೈಸಿದರು 
ಇನ್ನು ಸಮಾಜ ಸೇವಕ ಅಂಜಿನಪ್ಪ ಪುಟ್ಟು ದೇವರ ದರ್ಶನ ಪಡೆದು ಮಾತನಾಡಿ ದೇವರ ದರ್ಶನಕ್ಕೆ ಬಂದಿರುವ ಎಲ್ಲಾರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು. 
ಜೆಡಿಎಸ್ ಮುಖಂಡ ರವಿಕುಮಾರ್ ರವರಿಂದ ಉಚಿತ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿಎನ್.ಸ್ವಾಮಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ಮೂರೆ ದಿನಗಳಿಗೆ ತಲಕಾಯಲ ಬೆಟ್ಟ ಜಾತ್ರೆ ಬಂದಿದ್ದು ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀಭೂನೀಳಾ ಸಮೇತ ವೆಂಕಟೇಶ್ವರ ಸ್ವಾಮಿಯ ಆಶಿರ್ವಾದ ದಿಂದ ಉತ್ತಮ ಆಡಳಿತ ನೀಡಲು ದೇವರ ಅನುಗ್ರಹ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ರೈತರು ಮತ್ತು ಸಾರ್ವಜನಿಕರಿಗೆ ಉತ್ತಮ ಆಡಳಿತ ಮಾಡಲು ಪಣ ತೊಡುವೆ ಎಂದು ತಹಶೀಲ್ದಾರ್ ಸ್ವಾಮಿ ತಿಳಿಸಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ಆಡಳಿತ‌ ವರ್ಗ, ಪೋಲಿಸ್ ಇಲಾಖೆ, ಆರೋಗ್ಯ ಇಲಾಖೆಯವರೊಂದಿಗೆ ದೇವಾಲಯದ ಟ್ರಸ್ಟ್ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರು ಪಾಲ್ಗೊಂಡಿದ್ದರು.

ವರದಿ -ಗೊರಮಡಗು ಮೈತ್ರಿ ಲೋಕೇಶ್ 

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ