ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬ ಸಾಹೇಬ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆ

ಶಿಡ್ಲಘಟ್ಟ- ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾಕ್ಟರ್.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
 ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಮಾತನಾಡಿ, ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತ್ರುತ್ವದ ಮೂಲಕ ಜಾತ್ಯಾತೀತ ಮತ್ತು ಸಮಾಜವಾದಿ ಪ್ರಜಾಪ್ರಭುತ್ವದ ದೇಶ ಕಟ್ಟಲು ಡಾ. ಬಿ.ಆರ್ ಅಂಬೇಡ್ಕರ್ ರವರು ಎಳೆದು ತಂದು ನಿಲ್ಲಿಸಿದ ವಿಮೋಚನಾ ರಥವನ್ನು ಮುಂದಕ್ಕೆ ಒಯ್ಯಲು ನಾವೆಲ್ಲ ಕೈಜೋಡಿಸೋಣ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು, ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ, ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ. ಅವರ ಜೀವನ, ಅವರ ತತ್ವಗಳ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬ ಸಾಹೇಬ್ ಅಂಬೇಡ್ಕರ್ ರವರ 132ನೇ ಜಯಂತಿ ಆಚರಣೆ ಮಾಡಿಕೊಳ್ಳಬೇಕು ಎಂದರು.
ಡಾಕ್ಟರ್.ಬಿ.ಆರ್.ಅಂಬೇಡ್ಕರ್ ರವರ ಜೀವನ, ಚರಿತ್ರೆ, ವಿಚಾರಧಾರೆ, ಕೊಡುಗೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಜಾನಪದ ಕಲಾ ತಂಡದವರು ಹೊಸಬಗೆಯಾಗಿ ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ರವರು, ತಹಶೀಲ್ದಾರ್ ಸ್ವಾಮಿ, ನಗರಸಭೆ ಕಮಿಷನರ್ ಶ್ರೀಕಾಂತ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಬ್ಬಾರೆಡ್ಡಿ, CDPO ನೌತಾಜ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಸಹ ಉಪಸ್ಥಿತರಿದ್ದರು.


Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ