ಸರ್ಕಾರಿ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ:- ದ ಸಂ ಸ ಮನವಿ

*ಶಿಡ್ಲಘಟ್ಟ* ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆನೇಕ ರೀತಿಯ ಅವ್ಯವಸ್ಥೆಗಳು ಹಾಗೂ ಸಮಸ್ಯೆಗಳು ತಾಂಡವವಾಡುತ್ತಿದ್ದು ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳು, ಗರ್ಭಿಣಿಯರು,ಅಂಗವಿಕಲರು, ವೃದ್ಧರಿಗೆ, ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಎಲ್ಲರಿಗೂ ಕೂಡಾ ಅನೇಕ ರೀತಿಯಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಂದ  ತೊಂದರೆ ಉಂಟಾಗಿರುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕರಾದ ಎನ್.ಎ.ವೆಂಕಟೇಶ್ (ವೆಂಕಿ) ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ನಂತರ ಮಾತನಾಡಿದ ಅವರು ಆಸ್ಪತ್ರೆಯಲ್ಲಿ ಇರುವ ಸಮಸ್ಯೆಗಳ ಪಟಿಯನ್ನು ಓದುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರು ತೊಂದರೆಗಳನ್ನು ಜಿಲ್ಲಾ ಆರೋಗ್ಯ ಧಿಕಾರಿಗಳಿಗೆ ಮನವರಿಕೆ ಮಾಡಿದರು

*ಆಸ್ಪತ್ರೆ ಯಲ್ಲಿರುವ ಸಮಸ್ಯೆಗಳು*
01. ಗರ್ಭಿಣಿಯರು ಹೆರಿಗೆಗೆ ಬಂದಾಗ ಸರಿಯಾಗಿ ಪರೀಕ್ಷಿಸದೆ ಬೇರೆ ಆಸ್ಪತ್ರೆಗೆ ಹೋಗಲು ಶಿಫಾರಸ್ಸು ಮಾಡುತ್ತಿದ್ದಾರೆ. ಇದರಿಂದ ಬಡವರು ದಿಕ್ಕು ತೋಚದೆ ತೊಂದರೆಗೆ ಒಳಗಾಗಿ ಆನೇಕ ಸಲ ಬೇರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆದಲ್ಲಿಯೇ ಸಾಮಾನ್ಯ ಹೆರಿಗೆ ಆಗಿರುತ್ತದೆ

2 ಸಂಜೆ ವೇಳೆಯಲ್ಲಿ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ, ಕರ್ತವ್ಯ ನಿರತ ವೈದ್ಯರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವುದಿಲ್ಲ.

3. ರಾತ್ರಿವೇಳೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ.

4 ಆಸ್ಪತ್ರೆಯ ಸ್ವಚ್ಛತೆಯನ್ನು ಸರಿಯಾಗಿ ಕಾಪಾಡಿರುವುದಿಲ್ಲ.

5 ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿರುವುದಿಲ್ಲ.

6 ಆಸ್ಪತ್ರೆಯ ಆವರಣದಲ್ಲಿರುವ ಕ್ಯಾಂಟೀನ್‌ನ್ನು ಸರಿಯಾಗಿ ನಿರ್ವಹಿಸುತ್ತಿರುವುದಿಲ್ಲ.

7 ಮೂಳೆಗೆ ಸಂಬಂಧಿಸಿದ ಖಾಯಿಲೆಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಅಪರೇಷನ್ ಸಹ ಮಾಡುತ್ತಿಲ್ಲ

 8. ಕಿವಿ ಮೂಗು ಗಂಟಲು ರೋಗಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಹಾಗೂ ಅಂಗವಿಕಲತೆಯ ಶೇಕಡವಾರು ಪರೀಕ್ಷೆ ಮಾಡುವ ಯಂತ್ರವನ್ನು ಇದುವರೆವಿಗೂ ಬಳಸಿರುವುದಿಲ್ಲ.

9 ಪ್ರಯೋಗಾಲಯದಲ್ಲಿ ಪರೀಕ್ಷೆಗಳು ಸರಿಯಾಗಿ ನಡೆಸುತ್ತಿಲ್ಲ, ಯಂತ್ರೋಪಕರಣಗಳು ಹಾಗೂ ಪರೀಕ್ಷೆಗೆ ಉಪಯೋಗಿಸುವ ದ್ರವ ಔಷದಿಗಳು ಸಹ ಬಳಕೆ ಮಾಡುತ್ತಿಲ್ಲ.

10. 100 ಹಾಸಿಗೆಗಳನ್ನು ಹೊಂದಿದ್ದರೂ ಸಹ ಕೇವಲ 5-10 ರೋಗಿಗಳು ಮಾತ್ರ ದಾಖಲಾಗುತ್ತಿದ್ದು ಉಳಿದ ರೋಗಿಗಳನ್ನು ಉದ್ದೇಶ ಪೂರಕವಾಗಿ ಬೆಂಗಳೂರು ಮತ್ತು ಜಿಲ್ಲಾ ಆಸ್ಪತ್ರೆಗೆ ಕಳುಹಿಸುತ್ತಿದ್ದಾರೆ.

11. ಸರ್ಕಾರಿ ಕರ್ತವ್ಯ ನಿರತ ವೈದ್ಯರು ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದೇ ಖಾಸಗಿ ಕ್ಲೀನಿಕ್‌ಗಳನ್ನು ನಡೆಸುತ್ತಿದ್ದಾರೆ.  ಎಂದು ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು 

  
ಮನವಿ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಂಬಂಧ ಪಟ್ಟ ಸಮಸ್ಯೆಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು


ಈ ಸಂದರ್ಭದಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮುಂತಾದವರು ಹಾಜರಿದ್ದರು

Comments

Popular posts from this blog

ಗಂಗಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಚುನಾವಣೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆಯಲ್ಲಿ ಪ್ರತಿಜ್ಞೆ ವಿಧಿ ಭೋದಿಸಲಾಯಿತು

'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ