'ಪೆನ್‌ಡ್ರೈವ್' ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿಧ ಪ್ರಜ್ವಲ ರೇವಣ್ಣಬಂಧನಕ್ಕೆ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿ ಕುಂದಲಗುರ್ಕಿ ಮುನೀಂದ್ರಆಗ್ರಹ
ಇಡೀ ನಾಗರಿಕ ಸಮಾಜವೇ ಬೆಚ್ಚಿಬೀಳುವಂತ ಘಟನೆ ಹಾಸನದಲ್ಲಿ ನಡೆದಿದೆ. ಪೆನ್‌ಡ್ರೈವ್ ಮುಖಾಂತರ ಮಹಿಳೆಯರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಬಿಡುಗಡೆ ಮಾಡಿ ವಾಟ್ಸ್‌ಆಪ್ ಮೂಲಕ ವ್ಯಾಪಕವಾಗಿ ಹರಡಲಾಗುತ್ತಿದೆ. ದೇಶದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ರವರ ಮೊಮ್ಮಗ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರನ್ನು ಅಕ್ರಮವಾಗಿ ಲೈಂಗಿಕವಾಗಿ ಬಳಸಿಕೊಂಡು ಅವರ ಖಾಸಗಿ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಆ ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಬದುಕು ಛಿದ್ರಗೊಂಡಿದೆ. ಆದರೆ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅವರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವ ಪ್ರಭಾವಿ ವ್ಯಕ್ಯಿ ಹಾಗು ಮಹಿಳೆಯರ ಖಾಸಗಿ ಲೈಂಗಿಕ ದೃಶ್ಯಗಳನ್ನು ಸಾರ್ವಜನಿಕವಾಗಿ ಹರಡುತ್ತಿರವ ವ್ಯಕ್ತಿಗೆ ಯಾವುದೇ ಶಿಕ್ಷೆಯಾಗುತ್ತಿಲ್ಲ. ಇಂತಹ ವಿಕ್ಷಿಪ್ತ ಮತ್ತು ವಿಕೃತ ಲೈಂಗಿಕ ಅಕ್ರಮದಿಂದಾಗಿ ಈ ರಾಜ್ಯದ ಜನತೆ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ನೂರಾರು ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅದನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿರುವ ಜಿಲ್ಲೆಯ ಪ್ರಭಾವಿ ವ್ಯಕ್ತಿ ಮತ್ತು ಆ ದೃಶಗಳನ್ನು ಸಾರ್ವಜನಿಕವಾಗಿ ಬಿತ್ತರಿಸಿ ಮಹಿಳೆಯರ ಖಾಸಗಿ ಬದುಕಿಗೆ ದಕ್ಕೆ ತಂದಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯಿಸುತಿದ್ದೇವೆ
Comments
Post a Comment